Home / ರಾಜ್ಯ / ಮಧುಗಿರಿ: ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮತ್ತೊಂದು ಹೊಸ ಅಧ್ಯಾಯಕ್ಕೆ ಚಾಲನೆ ದೊರೆತಿದ್ದು, “ವಿಜ್ವಲ ಸುದ್ದಿ” ಪಾಕ್ಷಿಕ ಪತ್ರಿಕೆಯ ಭವ್ಯ ಲೋಕಾರ್ಪಣೆ ಕಾರ್ಯಕ್ರಮ ಮಧುಗಿರಿಯಲ್ಲಿ ಅದ್ದೂರಿಯಾಗಿ ನಡೆಯಿತು.

ಮಧುಗಿರಿ: ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮತ್ತೊಂದು ಹೊಸ ಅಧ್ಯಾಯಕ್ಕೆ ಚಾಲನೆ ದೊರೆತಿದ್ದು, “ವಿಜ್ವಲ ಸುದ್ದಿ” ಪಾಕ್ಷಿಕ ಪತ್ರಿಕೆಯ ಭವ್ಯ ಲೋಕಾರ್ಪಣೆ ಕಾರ್ಯಕ್ರಮ ಮಧುಗಿರಿಯಲ್ಲಿ ಅದ್ದೂರಿಯಾಗಿ ನಡೆಯಿತು.

ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎನ್. ರಾಜಣ್ಣ ಅವರು ಲೋಕಾರ್ಪಣೆ ಮಾಡುವ ಮೂಲಕ ಅಧಿಕೃತವಾಗಿ ಆರಂಭಿಸಿದರು. ಈ ವೇಳೆ ಪತ್ರಿಕೆಯ ಸಂಪಾದಕರಾದ ಹರೀಶ್ ಸಿ.ಎ. ಅವರು ಪತ್ರಿಕೆಯ ಮೊದಲ ಪ್ರತಿಯನ್ನು ಬಿಡುಗಡೆ ಮಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸತ್ಯಸಂಧ ವರದಿ ಹಾಗೂ ಸಮಾಜಮುಖಿ ಚಿಂತನೆಗಳನ್ನು ಹರಡುವ ಉದ್ದೇಶದಿಂದ “ವಿಜ್ವಲ ಸುದ್ದಿ” ಪಾಕ್ಷಿಕ ಪತ್ರಿಕೆಯನ್ನು ಆರಂಭಿಸಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಗ್ರಾಮೀಣ ಪ್ರದೇಶದ ಸಮಸ್ಯೆಗಳು, ಜನರ ಧ್ವನಿ ಹಾಗೂ ಸಮಾಜದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ಪ್ರಾಮಾಣಿಕವಾಗಿ ಬೆಳಕಿಗೆ ತರುವಲ್ಲಿ ಇಂತಹ ಪತ್ರಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ಜಿಜೆಆರ್ ರಾಜಣ್ಣ, ನಿರ್ದೇಶಕರಾದ ನಾಗೇಶ್ ಬಾಬು, ಹನುಮಾನ್ ಬ್ಯಾಂಕಿನ ಮೇಲ್ವಿಚಾರಕರಾದ ಎನ್. ರಾಮಕೃಷ್ಣ, ಪ್ರದೀಪ್, ಸಿ.ಇ.ಒ ಟಿವಿಎಸ್ ಮಂಜುನಾಥ್, ಮಲ್ಲಿಕಾರ್ಜುನ್, ಹಾಗೂ ಲಾಯರ್ ಸಂಘದ ಅಧ್ಯಕ್ಷರಾದ ಪಿ.ಸಿ. ಕೃಷ್ಣಾರೆಡ್ಡಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
“ಸುದ್ದಿ ನೀಡುವುದಷ್ಟೇ ಅಲ್ಲ, ಸಮಾಜದ ಬದಲಾವಣೆಗೆ ಮುನ್ನುಡಿಯಾಗಬೇಕು” ಎಂಬ ಉದ್ದೇಶದೊಂದಿಗೆ ಆರಂಭವಾಗಿರುವ “ವಿಜ್ವಲ ಸುದ್ದಿ” ಪತ್ರಿಕೆ ಕನ್ನಡ ಪತ್ರಿಕೋದ್ಯಮಕ್ಕೆ ಹೊಸ ಮೆರುಗು ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಯಿತು.

Leave a Reply

Your email address will not be published. Required fields are marked *