ಮಧುಗಿರಿ: ಪಟ್ಟಣ ಹಾಗೂ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಶ್ರೀನಿವಾಸ್ ತಿಳಿಸಿದರು.
ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶ್ರಮಿಸಿ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಕರೆ ನೀಡಿದರು. ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ, ವಿದ್ಯುತ್ ಸಂಪರ್ಕ ಸೇರಿದಂತೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಈ ವೇಳೆ ಬಿಇಒ ಹನುಮಂತರಾಯಪ್ಪ, ಪುರಸಭೆ ಚೀಫ್ ಆಫೀಸರ್ ಸುರೇಶ್, ಸರ್ಕಲ್ ಇನ್ಸ್ಪೆಕ್ಟರ್ ಹನುಮಂತರಾಯಪ್ಪ, ಇಒ ಲಕ್ಷ್ಮಣ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪರೀಕ್ಷೆ ನಡೆಯುವ ಕೇಂದ್ರಗಳು ಮತ್ತು ವಿದ್ಯಾರ್ಥಿಗಳ ಸಂಖ್ಯೆ ಹೀಗಿದೆ:
ಸರ್ಕಾರಿ ಪದವಿ ಪೂರ್ವ ಕಾಲೇಜು, ಮಧುಗಿರಿ – 385
ಜುಪಿಟರ್ ಪ್ರೌಢಶಾಲೆ, ಮಧುಗಿರಿ – 346
ಸರ್ಕಾರಿ ಪದವಿ ಪೂರ್ವ ಕಾಲೇಜು ಹಿಂಭಾಗ – 322
ಸರ್ಕಾರಿ ಪ್ರೌಢಶಾಲೆ, ಪುರವಾರ – 288
ಸರ್ಕಾರಿ ಪದವಿ ಪೂರ್ವ ಕಾಲೇಜು, ಐಡಿ ಹಳ್ಳಿ – 313
ಸರ್ವೋದಯ ಪದವಿ ಪೂರ್ವ ಕಾಲೇಜು, ಕೊಡಿಗೆನಹಳ್ಳಿ – 393
ಶ್ರೀರಂಗನಾಥ ಗ್ರಾಮಾಂತರ ಪ್ರೌಢಶಾಲೆ, ನೇರಳೆಕೆರೆ – 189
ಸರ್ಕಾರಿ ಪದವಿ ಪೂರ್ವ ಕಾಲೇಜು, ಬ್ಯಾಲ್ಯ – 156
ಕರ್ನಾಟಕ ಪಬ್ಲಿಕ್ ಶಾಲೆ, ಮಿಡಿಗೇಶಿ – 292
ಸರ್ಕಾರಿ ಪ್ರೌಢಶಾಲೆ, ಬಡವನಹಳ್ಳಿ – 365
ಸಿದ್ದಗಂಗಾ ಗ್ರಾಮಾಂತರ ಪ್ರೌಢಶಾಲೆ, ಗಂಜಲಗುಂಟೆ – 168
ಸರ್ಕಾರಿ ಪ್ರೌಢಶಾಲೆ, ಕಡಗತ್ತೂರು – 70
ಸರ್ಕಾರಿ ಪ್ರೌಢಶಾಲೆ, ದಬ್ಬೇಘಟ್ಟ – 295
ಗ್ರಾಮಾಂತರ ಸನಿವಾಸ ಪ್ರೌಢಶಾಲೆ, ಹೊಸಕೆರೆ – 142
ವಿದ್ಯಾರ್ಥಿಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಶಾಂತಿಯುತವಾಗಿ ಪರೀಕ್ಷೆ ಬರೆಯುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ವರದಿ:ಹರೀಶ್ ಸಿ.ಎ












